​      
     ಮಾಹಿತಿ ಹ​ಕ್ಕು​ 4(1)B​

      ಕಾಯ್ದೆಯ ಬಗ್ಗೆ 

ಈ ಅಧಿನಿಯಮವನ್ನು ಅಧಿನಿಯಮಿತಿಗೊಳಿಸಿದ ದಿನಾಂಕದಿಂದ ಒಂದುನೂರ ಇಪ್ಪತ್ತುದಿನಗಳೊಳಗಾಗಿ-​​

(1) ಅದರ ರಚನೆ, ಕಾರ್ಯಗಳು ಮತ್ತು ಕರ್ತವ್ಯಗಳ ವಿವರಗಳನ್ನು;

(2)ಅದರ ಅಧಿಕಾರಿಗಳ ಮತ್ತು ನೌಕರರ ಅಧಿಕಾರಗಳನ್ನು ಮತ್ತು ಕರ್ತವ್ಯಗಳನ್ನು;

(3) ಮೇಲ್ವಿಚಾರಣೆ ಮತ್ತು ಹೊಣೆಗಾರಿಕೆಯ ಮಾರ್ಗಗಳು ಸೇರಿದಂತೆ ತೀರ್ಮಾನ ತೆಗೆದುಕೊಳ್ಳುವಪ್ರಕ್ರಿಯೆಯಲ್ಲಿ ಅನುಸರಿಸಬೇಕಾದ ಕಾರ್ಯವಿಧಾನವನ್ನು;

(4) ಅದರ ಕಾರ್ಯಗಳ ನಿರ್ವಹಣೆಗೆ ಅದು ರೂಪಿಸಿರುವ ಸೂತ್ರಗಳನ್ನು;

(5) ಅದರ ಕಾರ್ಯಗಳನ್ನು ನೆರವೇರಿಸುವುದಕ್ಕಾಗಿ ಅದು ಹೊಂದಿರುವ ಅಥವಾ ಅದರನಿಯಂತ್ರಣದಲ್ಲಿರುವ ಅಥವಾ ಅದರ ಉದ್ಯೋಗಿಗಳು ಬಳಸುವ ನಿಯಮಗಳು, ವಿನಿಯಮಗಳು,ಅನುಸೂಚಿಗಳು, ಕೈಪಿಡಿಗಳು ಮತ್ತು ದಾಖಲೆಗಳನ್ನು;

(6) ಅದು ಹೊಂದಿರುವ ಅಥವಾ ಅದರ ನಿಯಂತ್ರಣದಲ್ಲಿರುವ ದಸ್ತಾವೇಜುಗಳ ಪ್ರವರ್ಗಗಳವಿವರಪಟ್ಟಿಯನ್ನು;

(7) ಅದರ ಕಾರ್ಯನೀತಿಯ ರಚನೆ ಅಥವಾ ಅದರ ಅನುಷ್ಠಾನಕ್ಕೆ  ಸಂಬಂಧಿಸಿದಂತೆಸಾರ್ವಜನಿಕರೊಡನೆ ಸಮಾಲೋಚಿಸಲು ಅಥವಾ ಅವರ ಪ್ರಾತಿನಿಧ್ಯವಿರುವಂತೆ ಮಾಡಲು ಇರುವಂಥ

ಯಾವುದೇ ವ್ಯವಸ್ಥೆಯ ವಿವರಗಳನ್ನು;

(8) ಮಂಡಳಿಗಳು, ಪರಿಷತ್ತಗಳು, ಸಮಿತಿಗಳು ಅಥವಾ ಇತರ ನಿಕಾಯಗಳು ಮತ್ತು ಅದರಭಾಗವಾಗಿ ಅಥವಾ ಅದರ ಸಲಹೆಯ ಉದ್ದೇಶಕ್ಕಾಗಿ ರಚಿತವಾದ ಇಬ್ಬರು ಅಥವಾ ಹೆಚ್ಚುವ್ಯಕ್ತಿಗಳನ್ನೊಳಗೊಂಡ ಮಂಡಳಿಗಳ, ಪರಿಷತ್ತು ಗ, ಸಮಿತಿಗಳ ಮತ್ತು ಇತರ ನಿಕಾಯಗಳ ಸಭೆಗಳುಸಾರ್ವಜನಿಕರಿಗೆ ಮುಕ್ತವಾಗಿರುತ್ತವೆಯೇ ಅಥವಾ ಅಂತಹ ಸಭೆಗಳ ನಡಾವಳಿಗಳು ಸಾರ್ವಜನಿಕರಿಗೆದೊರೆಯುತ್ತವೆಯೇ ಎಂಬುದರ ವಿವರಪಟ್ಟಿಕೆಯನ್ನು;

(9) ಅದರ ಅಧಿಕಾರಿಗಳ ಮತ್ತು ನೌಕರರ ನಿರ್ದೇಶಿಕೆಯನ್ನು;

(10) ಅದರ ವಿನಿಯಮಗಳಲ್ಲಿ ಉಪಬಂಧಿಸಿರುವಂತೆ ಪರಿಹಾರದ ವ್ಯವಸ್ಥೆಯೂ ಸೇರಿದಂತೆ ಅದರಪ್ರತಿಯೊಬ್ಬ ಅಧಿಕಾರಿ ಮತ್ತು ನೌಕರರು ಪಡೆಯುವ ತಿಂಗಳ ಗೌರವಧನವನ್ನು;

(11) ಎಲ್ಲ ಯೋಜನೆಗಳ ವಿವರಗಳನ್ನು ಸೂಚಿಸುವ, ಪ್ರಸ್ತಾವಿತ ವೆಚ್ಚಗಳನ್ನು ಮತ್ತು ಮಾಡಲಾದಬಟವಾಡೆಗಳ ವರದಿಯನ್ನು ಸೂಚಿಸಿ; ಅದರ ಪ್ರತಿಯೊಂದು ಏಜೆನ್ಸಿಗೆ ಹಂಚಿಕೆ ಮಾಡಲಾದಆಯವ್ಯಯವನ್ನು,

(12) ಹಂಚಿಕೆ ಮಾಡಲಾದ ಮೊಬಲಗನ್ನೊಳಗೊಂಡು, ಸಹಾಯಧನ ಕಾರ್ಯಕ್ರಮಗಳ ಜಾರಿಯವಿಧಾನವನ್ನು ಮತ್ತು ಅಂತಹ ಕಾರ್ಯಕ್ರಮಗಳ ಫಲಾನುಭವಿಗಳ ವಿವರಗಳನ್ನು;

(13) ಅದು ನೀಡಿರುವ ರಿಯಾಯಿತಿಗಳನ್ನು, ಅನುಮತಿ ಪತ್ರಗಳನ್ನು ಅಥವಾ ಅಧಿಕಾರಪತ್ರಗಳನ್ನುಪಡೆಯುವವರ ವಿವರಗಳನ್ನು;

(14) ಅದರ ಬಳಿ ಲಭ್ಯವಿರುವ ಅಥವಾ ಅದು ಹೊಂದಿರುವ ವಿದ್ಯುನ್ಮಾನ ರೂಪಕ್ಕೆ ಪರಿವರ್ತಿಸಿರುವ,ಮಾಹಿತಿಗೆ ಸಂಬಂಧಿಸಿದ ವಿವರಗಳನ್ನು;

(15) ಸಾರ್ವಜನಿಕ ಉಪಯೋಗಕ್ಕಾಗಿ ಗ್ರಂಥಾಲಯವನ್ನು ಅಥವಾ ವಾಚನಾಲಯವನ್ನುನಿರ್ವಹಿಸುತ್ತಿದ್ದಲ್ಲಿ ಅದರ ಕೆಲಸದ ಸಮಯವನ್ನೊಳಗೊಂಡಂತೆ ಮಾಹಿತಿ ಪಡೆಯಲು ಸಾರ್ವಜನಿಕರಿಗೆ

ಲಭ್ಯವಿರುವ ಸೌಲಭ್ಯಗಳ ವಿವರಗಳನ್ನು;

(16) ಸಾರ್ವಜನಿಕ ಮಾಹಿತಿ ಅಧಿಕಾರಿಗಳ ಹೆಸರುಗಳು, ಪದನಾಮಗಳು ಮತ್ತು ಇತರ ವಿವರಗಳನ್ನು;

ನಿಯಮಿಸಬಹುದಾದಂತಹ ಇತರ ಮಾಹಿತಿಯನ್ನು ಪ್ರಕಟಿಸತಕ್ಕದ್ದು ಮತ್ತು ಆ ತರುವಾಯ ಪ್ರತಿವಷ

ಈ ಪ್ರಕಟಣೆಗಳನ್ನು ಅಂದಿನವರೆಗೆ ಪರಿಷ್ಕರಿಸತಕ್ಕದ್ದು.​


  ಮಾಹಿತಿ ಹಕ್ಕು​ 4(1)B ವಿವರ




​​​

Last modified at 3/16/2018 4:48 PM by homedept

ವಿಷಯ ಸ್ವಾಮ್ಯ ಮತ್ತು ನಿರ್ವಹಣೆ : ಒಳಾಡಳಿತ ಇಲಾಖೆ, ಕರ್ನಾಟಕ ಸರ್ಕಾರ

ಹಕ್ಕುತ್ಯಾಗ : ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು.

ವಿನ್ಯಾಸ ಮತ್ತು ಅಭಿವೃದ್ಧಿ : ಕರ್ನಾಟಕ ಸರ್ಕಾರ

©2016, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ.

Top